ADVERTISEMENT

ಹೊಸದುರ್ಗ | ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 2:45 IST
Last Updated 7 ಫೆಬ್ರುವರಿ 2022, 2:45 IST
ಅಪಘಾತಕ್ಕೀಡಾಗಿರುವ ಕಾರು
ಅಪಘಾತಕ್ಕೀಡಾಗಿರುವ ಕಾರು   

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಗೀತಾ (32), ತಾಯಿ ಶಾರದಾ (60) ಹಾಗೂ ಮಗಳು ಧ್ರುತಿ (5) ಮೃತಪಟ್ಟವರು. ನಾಗೇಶ (65), ದಯಾನಂದ (66), ಸುಧೀಂದ್ರ (35) ಗಾಯಗೊಂಡಿದ್ದು, ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ಸಂಭವಿಸಿರಬಹುದು ಎಂದು ಹೊಸದುರ್ಗ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.