ADVERTISEMENT

ಬಿ.ಜಿ.ಕೆರೆ ಬಳಿ ಕಾರು ಪಲ್ಟಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 5:44 IST
Last Updated 16 ಜನವರಿ 2026, 5:44 IST
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಬಳಿ ಗುರುವಾರ ಅಪಘಾತಕ್ಕೀಡಾಗಿರುವ ಕಾರು 
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಬಳಿ ಗುರುವಾರ ಅಪಘಾತಕ್ಕೀಡಾಗಿರುವ ಕಾರು    

ಮೊಳಕಾಲ್ಮುರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಗುರುವಾರ ತಾಲ್ಲೂಕಿನ ಬಿ.ಜಿ.ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಲಕ್ಷ್ಮೀ ಹೈಟೆಕ್‌ ನರ್ಸರಿ ಸಮೀಪದ ಎಚ್‌ಪಿ ಪೆಟ್ರೋಲ್‌ ಬಂಕ್‌ ಮುಂಭಾಗ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಭಾರ್ಗವಿ ಆಚಾರ್ಯ (51) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಭಾರ್ಗವಿ ಅವರ ಪತಿ ವಿಶ್ವನಾಥ್, ಪುತ್ರ ಪ್ರಣವ್‌ ಮತ್ತು ಪುತ್ರಿ ಎಂದು ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೊಳಕಾಲ್ಮುರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇವರೆಲ್ಲರೂ ಹೈದರಾಬಾದ್‌ ಮೂಲದವರಾಗಿದ್ದು, ಉಡುಪಿಯ ಶ್ರೀಕೃಷ್ಣ ಮಠಕ್ಕೆ ಹೋಗಿ ವಾಪಸ್‌ ಹೋಗುವಾಗ ಘಟನೆ ನಡೆದಿದೆ. ಪ್ರಣವ್‌ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ADVERTISEMENT

ಮೊಳಕಾಲ್ಮುರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.