ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅನಾರೋಗ್ಯದಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಹಿಂದಿರುಗುವಾಗ ಆರೋಗ್ಯ ಏರುಪೇರಾಗಿದೆ. ಚಿತ್ರದುರ್ಗದ ಹೋಟೆಲ್ ನವೀನ್ ರೇಜೆನ್ಸಿಗೆ ಮಧ್ಯಾಹ್ನ ಊಟಕ್ಕೆ ಬಂದಿದ್ದ ಅವರು, ಕಾರಿನಿಂದ ಇಳಿಯುವಾಗ ಅಸ್ವಸ್ಥರಾಗಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವೇಶ್ವರ ಆಸ್ಪತ್ರೆಗೆ ಬಿಜೆಪಿ ಶಾಸಕರು ಹಾಗೂ ಮುಖಂಡರು ದೌಡಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.