ADVERTISEMENT

ಹೆಚ್ಚು ಗಿಡ-ಮರ ಬೆಳೆಸಿ ಬಯಲುಸೀಮೆ ಅಭಿವೃದ್ಧಿಪಡಿಸಬೇಕು : ಶಾಸಕ ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:36 IST
Last Updated 3 ಜುಲೈ 2025, 15:36 IST
ಚಳ್ಳಕರೆಯ ಆದರ್ಶ ಮಹಾ ವಿದ್ಯಾಲಯದ ಆವರಣದಲ್ಲಿ ಗುರುವಾರ ಶಾಸಕ ಟಿ.ರಘುಮೂರ್ತಿ, ಗಿಡ ನೆಟ್ಟು ನೀರು ಹಾಕಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಕೆ.ವೀರಭದ್ರಯ್ಯ, ನಗರಸಭೆ ಅಧ್ಯಕ್ಷೆ ಶಿಲ್ಪಾ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಇದ್ದರು
ಚಳ್ಳಕರೆಯ ಆದರ್ಶ ಮಹಾ ವಿದ್ಯಾಲಯದ ಆವರಣದಲ್ಲಿ ಗುರುವಾರ ಶಾಸಕ ಟಿ.ರಘುಮೂರ್ತಿ, ಗಿಡ ನೆಟ್ಟು ನೀರು ಹಾಕಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಕೆ.ವೀರಭದ್ರಯ್ಯ, ನಗರಸಭೆ ಅಧ್ಯಕ್ಷೆ ಶಿಲ್ಪಾ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಇದ್ದರು   

ಚಳ್ಳಕೆರೆ : ‘ಹೆಚ್ಚು ಗಿಡ-ಮರಗಳನ್ನ ಬೆಳೆಸುವ ಮೂಲಕ ಬಯಲುಸೀಮೆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ಆದರ್ಶ ಮಾಹಾ ವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಲಹರಣ ಮಾಡುವ ಬದಲು ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸಬೇಕು. ಸಾಮಾಜಿಕ, ವೈಚಾರಿಕ ಮೌಲ್ಯವುಳ್ಳ ಶಿಕ್ಷಣ ಪಡೆದು ಉತ್ತಮ ಭವಿಷ್ಯವನ್ನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಕೆ.ವೀರಭದ್ರಯ್ಯ, ನಗರಸಭೆ ಅಧ್ಯಕ್ಷೆ ಶಿಲ್ಪಾ, ಪ್ರಾಂಶುಪಾಲ ಪಾಲಯ್ಯ ನಗರಸಭೆ ಉಪಾಧ್ಯಕ್ಷೆ ಕವಿತಾ ಬೋರಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ, ಮಾಜಿ ಅಧ್ಯಕ್ಷ ರಮೇಶ್‍ಗೌಡ, ಎಂ.ಜಿ.ರಾಘವೇಂದ್ರ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಡಾ.ಸುನಿಲ್, ಮುಖ್ಯ ಶಿಕ್ಷಕ ಅಶೋಕರೆಡ್ಡಿ, ಸಹ ಶಿಕ್ಷಕ ಎಲ್.ರುದ್ರಮುನಿ, ಅರಣ್ಯ ಇಲಾಖೆ ಎಸಿಎಫ್ ಸುರೇಶ್, ಡಿಆರ್‌ಎಫ್‌ಓ ರಾಜೇಶ್, ದರ್ಶನ್, ಗುರುಲಿಂಗೇಶ್, ಮುರುಡಿಸ್ವಾಮಿ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.