ADVERTISEMENT

‘ಬೆಳೆನಷ್ಟ: ಸರ್ಕಾರಕ್ಕೆ ಯಥಾವತ್ ವರದಿ ಕಳುಹಿಸಿ’

ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 5:22 IST
Last Updated 20 ಸೆಪ್ಟೆಂಬರ್ 2025, 5:22 IST
ಚಳ್ಳಕೆರೆಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿದರು
ಚಳ್ಳಕೆರೆಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿದರು   

ಚಳ್ಳಕೆರೆ: ಈಚೆಗೆ ನಿರಂತರವಾಗಿ ಸುರಿದ ಮಳೆಯಿಂದಾಗಿ ತಾಲ್ಲೂಕಿನ ವಿವಿಧ ಗ್ರಾಮದಲ್ಲಿ ಬೆಳೆದ ಈರುಳ್ಳಿ, ಮೆಕ್ಕೆಜೋಳ, ಟೊಮೆಟೊ ಮುಂತಾದ ಬೆಳೆಗಳು ಹಾಳಾಗಿ ನಷ್ಟ ಉಂಟಾಗಿದ್ದು, ಇದರಿಂದ ಬೆಳೆಗಾರರು ಕಂಗಲಾಗಿದ್ದಾರೆ. ರೈತರಿಗೆ ಪರಿಹಾರ ತರಿಸಿಕೊಡುವ ಸಲುವಾಗಿ ಬೆಳೆನಷ್ಟದ ಯಥಾವತ್ ವರದಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಹೂ ಬಿಡುವ ಹಂತದಲ್ಲೇ ಗಿಡಗಳು ಒಣಗುವ ಸ್ಥಿತಿ ತಲುಪಿವೆ. ಬೆಳೆ ವೈಫಲ್ಯದ ಕುರಿತು ಸರ್ಕಾರಕ್ಕೆ ಪತ್ರ ಬರೆದು ಸೂಕ್ತ ಮಾಹಿತಿ ನೀಡಲಾಗುವುದು. ಬೆಳೆ ಪರಿಹಾರದಲ್ಲಿ ಅವ್ಯವಹಾರ ನಡೆಸಿರುವ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ಅರ್ಹ ರೈತರಿಗೆ ನೀಡಲಾಗುವುದು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್ ಹೇಳಿದರು.

ADVERTISEMENT

ಶಿಕ್ಷಣ ಇಲಾಖೆ ಜಾರಿಗೊಳಿಸುವ 20 ಅಂಶಗಳ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪರ್ಯಾಯ ಬೋಧನೆ ಮಾಡಬೇಕು ಎಂದು ಶಿಕ್ಷಣಾಧಿಕಾರಿಗೆ ಶಾಸಕರು ಸಲಹೆ ನೀಡಿದರು.

ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ, ತಹಶೀಲ್ದಾರ್ ರೇಹಾನ್‍ ಪಾಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ್ ಮಾತನಾಡಿದರು. ಚಿತ್ರದುರ್ಗ ತಹಶೀಲ್ದಾರ್ ಗೋವಿಂದರಾಜ, ರವಿಕುಮಾರ್, ನಗರಸಭೆ ಅಧ್ಯಕ್ಷೆ ಶಿಲ್ಪಾ ಮುರಳೀಧರ್, ಪೌರಾಯುಕ್ತ ಜಗರೆಡ್ಡಿ, ಕೆಡಿಪಿ ಸದಸ್ಯ ಚೌಳೂರು ಬಸವರಾಜ, ಸುರೇಶ್ ಕುಮಾರ್, ರಮೇಶ್, ಜಾಕೀರ್ ಹುಸೇನ್, ಸದಸ್ಯೆ ನೇತ್ರಾವತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.