ADVERTISEMENT

ಚಳ್ಳಕೆರೆ | ಹಳೇ ಶಾಲಾ–ಕಾಲೇಜುಗಳಿಗೆ ಹೈಟೆಕ್ ಸ್ಪರ್ಶ: ಶಾಸಕ ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 4:04 IST
Last Updated 21 ಜುಲೈ 2025, 4:04 IST
ಚಳ್ಳಕೆರೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ತಾಲ್ಲೂಕು ಸಮಾವೇಶದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪಾ ಮತ್ತು ಉಪಾಧ್ಯಕ್ಷೆ ಕವಿತಾ ಅವರನ್ನು ಶಾಸಕ ಟಿ. ರಘುಮೂರ್ತಿ ಗೌರವಿಸಿದರು
ಚಳ್ಳಕೆರೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ತಾಲ್ಲೂಕು ಸಮಾವೇಶದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪಾ ಮತ್ತು ಉಪಾಧ್ಯಕ್ಷೆ ಕವಿತಾ ಅವರನ್ನು ಶಾಸಕ ಟಿ. ರಘುಮೂರ್ತಿ ಗೌರವಿಸಿದರು   

ಚಳ್ಳಕೆರೆ: ‘ವಿವಿಧ ಸಮುದಾಯದ ಮಕ್ಕಳ ಶಿಕ್ಷಣದ ಸಲುವಾಗಿ ನಗರದ ಹಳೆ ಶಾಲಾ– ಕಾಲೇಜು ಕಟ್ಟಡಗಳಿಗೆ ಕೋಟ್ಯಂತರ ವೆಚ್ಚದಲ್ಲಿ ಅತ್ಯಾಧುನಿಕ ಸ್ಪರ್ಶ ನೀಡಲಾಗಿದೆ’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚಳ್ಳಕೆರೆ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ತಾಲ್ಲೂಕು ಸಮಾವೇಶ ಮತ್ತು ನೂತನ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ನಿಷ್ಠೆಯಿಂದ ದುಡಿಯಬೇಕು. ಜಾತಿ, ಧರ್ಮ ಹಾಗೂ ಪಕ್ಷ ಎಲ್ಲವನ್ನು ಮರೆತು ಸಾಮರಸ್ಯದಿಂದ ಕೆಲಸ ಮಾಡಬೇಕು. ಶರಣರ ಕಾಯಕ ತತ್ವ, ದಾಸೋಹ ಮತ್ತು ಶಿಕ್ಷಣದ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ವೀರಶೈವ ಸಮಾಜದ ಶೈಕ್ಷಣಿಕ ಹಾಗೂ ಸಾಂಸ್ಕಂತಿಕ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಭರವಸೆ ನೀಡಿದರು.

‘ವೈಯಕ್ತಿಕ ದ್ವೇಷ– ಅಸೂಯೆ ಮರೆತು ಇತರೆ ಸಮಾಜಕ್ಕೆ ಮಾದರಿಯಾಗುವ ಮೂಲಕ ಸಮಾಜಮುಖಿ ಚಟವಟಿಕೆಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದು ವೀರಶೈವ ಲಿಂಗಾಯತ ಮುಖಂಡಿರಿಗೆ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರಮಹಾದೇವ ಬಿದರಿ ಕಿವಿ ಮಾತು ಹೇಳಿದರು.

ಚಳ್ಳಕೆರೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ತಾಲ್ಲೂಕು ಸಮಾವೇಶದಲ್ಲಿ ಶಾಸಕ ಟಿ.ರಘುಮೂರ್ತಿ ಮಾತನಾಡಿದರು.

ತುಮಕೂರು ತಪೋವನ ಹಿರೇಮಠ ಕ್ಷೇತ್ರದ ಶಿವಾನಂದ ಸ್ವಾಮೀಜಿ, ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸನ್ನ, ತಾಲ್ಲೂಕು ಘಟಕದ ಅಧ್ಯಕ್ಷ ಕಿರಣಶಂಕರ ಮಾತನಾಡಿದರು.

ಉಪಾಧ್ಯಕ್ಷ ಮುರುಗೇಶ್, ನಗರಸಭೆ ಅಧ್ಯಕ್ಷೆ ಶಿಲ್ಪಾ ಮುರಳಿಧರ, ಉಪಾಧ್ಯಕ್ಷೆ ಕವಿತಾ, ಮಾಜಿ ಅಧ್ಯಕ್ಷೆ ಮಂಜುಳಾ, ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಸಮಿತಿ ಮಾಜಿ ಅಧ್ಯಕ್ಷ ಟಿ.ಎ.ಟಿ. ಪ್ರಭುದೇವ್, ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಜಿ. ಕಿರಣ್, ವಿಜಯಪಾಟೀಲ್, ವೀರಶೈವ ಮಹಾಸಭಾ ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಶಶಿಕಲಾ ರವಿಶಂಕರ್, ರೂಪವಿನಯ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.