ADVERTISEMENT

ಚಳ್ಳಕೆರೆ: ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 5:49 IST
Last Updated 8 ಜುಲೈ 2025, 5:49 IST
ಏಕಾದಶಿ ಪ್ರಯುಕ್ತ ಚಳ್ಳಕೆರೆಯ ತ್ಯಾಗರಾಜ ದತ್ತಾತ್ರೇಯ ದೇವಸ್ಥಾನದಲ್ಲಿ ಸೋಮವಾರ ಭಜನಾ ಮಂಡಳಿಯ ಪದಾಧಿಕಾರಿಗಳು ದತ್ತಾತ್ರೇಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದರು 
ಏಕಾದಶಿ ಪ್ರಯುಕ್ತ ಚಳ್ಳಕೆರೆಯ ತ್ಯಾಗರಾಜ ದತ್ತಾತ್ರೇಯ ದೇವಸ್ಥಾನದಲ್ಲಿ ಸೋಮವಾರ ಭಜನಾ ಮಂಡಳಿಯ ಪದಾಧಿಕಾರಿಗಳು ದತ್ತಾತ್ರೇಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದರು    

ಚಳ್ಳಕೆರೆ: ಏಕಾದಶಿ ಪ್ರಯುಕ್ತ ಇಲ್ಲಿನ ತ್ಯಾಗರಾಜ ದತ್ತಾತ್ರೇಯ ದೇವಸ್ಥಾನದಲ್ಲಿ ಸೋಮವಾರ ಭಜನಾ ಮಂಡಳಿಯ ಪದಾಧಿಕಾರಿಗಳು, ದತ್ತಾತ್ರೇಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.

ನಂತರ ಶ್ರೀದತ್ತ ಉತ್ಸವಮೂರ್ತಿಗೆ ರುದ್ರಾಭಿಷೇಕ, ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯಿತು. ಬನಶಂಕರಿ ಮಹಿಳಾ ಮಂಡಳಿಯವರು ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು.

ಬದರಿನಾಥ ಕ್ಷೇತ್ರ ಶಂಕರಚಾರ್ಯ ಮಠದ ಅಖಂಡನಂದಾ ಪುರಿ ಜೀವಾನಂದ ಜ್ಯೋತಿ ಸ್ವಾಮೀಜಿ, ಬ್ರಾಹ್ಮಣ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಂತರಾಮ್ ಗೌತಮ್, ಸಿ.ಎನ್.ನಾಗಶಯನ ಗೌತಮ್, ಶ್ರೀನಾಥ್, ಪತಂಜಲಿ ಯೋಗ ಶಿಕ್ಷಣ ಸಮಿತಿ ಅಧ್ಯಕ್ಷ ಮಹೇಶ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.