ಬಂಧನ
ಚಳ್ಳಕೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಸಂಬಂಧ ನಗರದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
‘ಓ.ನಾಗಭೂಷಣ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ಫೆ. 6ರಂದು ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಬಾಲಕಿಗೆ ಪ್ರಾಣ ಬೆದರಿಕೆಯನ್ನೂ ಹಾಕಿದ್ದ. ಆಟೊ ಚಾಲಕ ಎಸ್. ಅಭಿಷೇಕ್ ಕೃತ್ಯಕ್ಕೆ ಸಹಕಾರ ನೀಡಿದ್ದ’ ಎಂದು ಬಾಲಕಿ ತಂದೆಯು ಗುರುವಾರ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ನಿರೀಕ್ಷಕ ಕೆ.ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.