ADVERTISEMENT

ಚಳ್ಳಕೆರೆ | ವಾಹನ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 14:17 IST
Last Updated 10 ಏಪ್ರಿಲ್ 2025, 14:17 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಚಳ್ಳಕೆರೆ: ತಾಲ್ಲೂಕಿನ ಸಾಣಿಕೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ (150– ಎ) ಬಳಿ ಬೈಕ್‌ಗೆ ಗುರುವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ತಾಲ್ಲೂಕಿನ ಕಲಮರಹಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆ ನಿವಾಸಿ ವೀರಭದ್ರಪ್ಪ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಲದಲ್ಲಿ ಬೆಳೆದ ಸೊಪ್ಪು ತಂದು ಚಳ್ಳಕೆರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿಕೊಂಡು ಮರಳಿ ಮನೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ಟಿ.ಬಿ.ರಾಜಣ್ಣ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.