ಚಿಕ್ಕಜಾಜೂರು: ಸಮೀಪದ ಬಾಣಗೆರೆ ಬಳಿ ಶನಿವಾರ ಸಂಜೆ ಸಂಭವಿಸಿದ್ದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ಹೊಳಲ್ಕೆರೆ ಪಟ್ಟಣದ ಎಸ್.ಅತಾವುಲ್ಲಾಖಾನ್ (44) ಭಾನುವಾರ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕೊಪ್ಪಳ ತಾಲ್ಲೂಕಿನ ಕೆಂಚಪ್ಪ (39) ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಾವುಲ್ಲಾಖಾನ್‌ನನ್ನು ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.