ADVERTISEMENT

ಚಿಕ್ಕಜಾಜೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 14:03 IST
Last Updated 24 ಫೆಬ್ರುವರಿ 2024, 14:03 IST
<div class="paragraphs"><p>ಸಾವು–ಪ್ರಾತಿನಿಧಿಕ ಚಿತ್ರ</p></div>

ಸಾವು–ಪ್ರಾತಿನಿಧಿಕ ಚಿತ್ರ

   

ಚಿಕ್ಕಜಾಜೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬರು ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ಚಿಕ್ಕಜಾಜೂರು ರೈಲ್ವೆ ಉಪ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಗಿರಿ ಮತ್ತು ಹೊಸದುರ್ಗ ರೈಲು ನಿಲ್ದಾಣಗಳ ಮಧ್ಯೆ ಅಂದಾಜು 55ರಿಂದ 60 ವರ್ಷದ ಅಪರಿಚಿತ ವ್ಯಕ್ತಿಯ ಶವ ದೊರೆತಿದೆ. ಮೃತ ವ್ಯಕ್ತಿ 5.3 ಅಡಿ ಎತ್ತರ, ಸದೃಢ ಮೈಕಟ್ಟು, ದುಂಡು ಮುಖ, ಗೋಧಿ ಮೈ ಬಣ್ಣ, ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿದ್ದಾರೆ. ಬಿಳಿ ಬಣ್ಣದ (ಪಟ್ಟಿಯುಳ್ಳ) ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಬನಿಯನ್, ನೀಲಿ ಬಣ್ಣದ ಪಂಚೆ ಧರಿಸಿದ್ದಾರೆ. ಶರ್ಟ್‌ನ ಕಾಲರ್‌ನಲ್ಲಿ ಎಸ್‌ಕೆಎಂ ಟೈಲರ್ ಎಂಬ ಪ್ರಿಂಟೆಡ್ ತುಣುಕು ಇದೆ. ಮೃತ ದೇಹವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದೆ.

ADVERTISEMENT

ಸಂಬಂಧಿಕರು ಯಾರಾದರೂ ಇದ್ದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ 08192259643, 9480800469, 9900754363 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಚಿಕ್ಕಜಾಜೂರು ರೈಲ್ವೆ ಉಪ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.