ADVERTISEMENT

ಚಿತ್ರದುರ್ಗ | ಬಾಲಕಿ ಅಪಹರಿಸಿ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 13:30 IST
Last Updated 23 ಜೂನ್ 2022, 13:30 IST
   

ಚಿತ್ರದುರ್ಗ: ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಯುವಕನಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷ ಜೈಲು ಹಾಗೂ ₹ 7 ಸಾವಿರ ದಂಡ ವಿಧಿಸಿ ಗುರುವಾರ ಆದೇಶಿಸಿದೆ.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯ ವೆಂಕಟೇಶ (25) ಶಿಕ್ಷೆಗೆ ಗುರಿಯಾದ ಅಪರಾಧಿ. ಸಂತ್ರಸ್ತ ಬಾಲಕಿಗೆ ₹ 4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ಬಿ.ಕೆ.ಕೋಮಲ ಅವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.

2019ರ ಜೂನ್‌ 16ರಂದು ಬಾಲಕಿ ಶಾಲೆಗೆ ತರಳುತ್ತಿದ್ದಳು. ಮಾರ್ಗ ಮಧ್ಯದಲ್ಲಿ ಬಾಲಕಿಯನ್ನು ಅಪಹರಿಸಿದ ಆರೋಪಿ ವಿವಿಧ ಸ್ಥಳಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ ಎಚ್‌.ಆರ್‌.ಜಗದೀಶ್‌ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.