ADVERTISEMENT

ಸಂತ್ರಸ್ತ ಮಕ್ಕಳನ್ನು ಭೇಟಿ ಮಾಡಿದ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 10:45 IST
Last Updated 29 ಆಗಸ್ಟ್ 2022, 10:45 IST
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ   

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಸೋಮವಾರ ಭೇಟಿ ಮಾಡಿದರು.

ಬಾಲಕಿಯರ ಬಾಲ ಮಂದಿರಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಅವರೊಂದಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿದೇವಿ, ಪೊಲೀಸ್ ವರಿಷ್ಠಾಧಿಕಾರಿ ಪರುಶರಾಮ್ ಇದ್ದರು.

ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಕ್ಕಳಿಂದ ಮಾಹಿತಿ ಪಡೆದರು. ಜಯಶ್ರೀ ಅವರು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬಾಲಮಂದಿರದಲ್ಲಿ ಇದ್ದರು.

ADVERTISEMENT

ಇದಕ್ಕೂ ಮುನ್ನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಗಿರೀಶ್ ಭೇಟಿ ನೀಡಿ ಮಕ್ಕಳೊಂದಿಗೆ ಮಾತನಾಡಿದರು. ಕಾನೂನು ಸೇವೆಯನ್ನು ಉಚಿತವಾಗಿ ನೀಡುವ ಆಶ್ವಾಸನೆ ನೀಡಿದರು.

ಬಾಲಮಂದಿರದ ಎದುರು ಜಮಾಯಿಸಿದ ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಸಂತ್ರಸ್ತ ಬಾಲಕಿಯರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.