ಧರ್ಮಪುರ: ವಾಹನ ಚಾಲಕರು ಅಪಘಾತ ವಲಯದಲ್ಲಿರುವ ನಾಮಫಲಕಗಳನ್ನು ಗಮನಿಸಿ ವಾಹನ ಚಲಾಯಿಸಬೇಕು ಎಂದು ಸಿಪಿಐ ಗುಡ್ಡಪ್ಪ ತಿಳಿಸಿದರು.
ಸಮೀಪದ ಚಿಲ್ಲಹಳ್ಳಿ ಬಳಿ ಅಪಘಾತ ವಲಯಗಳಲ್ಲಿ ಜಾಗೃತಿ ನಾಮಫಲಕಗಳನ್ನು ಅಳವಡಿಸುವ ಮೂಲಕ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ವಿನೂತನವಾಗಿ ಆಚರಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ರಸ್ತೆ ತಿರುವಿನಲ್ಲಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಜೋರಾಗಿ ವಾಹನಗಳನ್ನು ಓಡಿಸಿಕೊಂಡು ಬಂದು ಅಪಘಾತವಾಗಿ ಮರಣ ಹೊಂದುತ್ತಿದ್ದಾರೆ. ಪ್ರತಿ ತಿರುವಿನಲ್ಲಿ ಜಾಗೃತಿ ನಾಮಫಲಕಗಳನ್ನು ಅಳವಡಿಸುತ್ತಿದ್ದು, ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.
ಪಿಎಸ್ಐ ಬಾಹುಬಲಿ ಎಂ. ಪಡನಾಡ, ಪೊಲೀಸ್ ಸಿಬ್ಬಂದಿ ಬಬ್ಬೂರು ನಾಗರಾಜ್, ನಿಂಗಪ್ಪ, ಹರ್ಷ, ಕವಿರಾಜ್, ಹೊಸಯಳನಾಡು ನಾಗರಾಜ್, ನಾಗಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.