ADVERTISEMENT

ಹೊಸದುರ್ಗ | 'ದೇಶದ ಅಭಿವೃದ್ಧಿಗೆ ಶಿಕ್ಷಣಕ್ಕೆ ಒತ್ತು ನೀಡಿ'

ಉದ್ಯಮಿ ಡಿ.ಸಿ.ಪ್ರದೀಪ್

​ಪ್ರಜಾವಾಣಿ ವಾರ್ತೆ
Published 13 ಮೇ 2025, 14:27 IST
Last Updated 13 ಮೇ 2025, 14:27 IST
ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಹೊಸದುರ್ಗದ ಟಿ.ಬಿ.ವೃತ್ತದಲ್ಲಿ ಚಾಲನೆ ನೀಡಲಾಯಿತು
ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಹೊಸದುರ್ಗದ ಟಿ.ಬಿ.ವೃತ್ತದಲ್ಲಿ ಚಾಲನೆ ನೀಡಲಾಯಿತು   

ಹೊಸದುರ್ಗ: ಗ್ರಾಮಗಳಲ್ಲಿ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಅಗತ್ಯ. ಶಿಕ್ಷಣದ ಶಕ್ತಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಉದ್ಯಮಿ ಡಿ.ಎಸ್. ಪ್ರದೀಪ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ 134ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತ ಇಂದು ಶಕ್ತಿಶಾಲಿ ರಾಷ್ಟ್ರವಾಗಿ ಬೆಳೆಯಲು ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣವಾಗಿದೆ. ಸಾಮಾನ್ಯನೊಬ್ಬ ಪ್ರಧಾನಿ, ಶಾಸಕ, ಸಂಸದನಾಗುವ ಅವಕಾಶವನ್ನು ಸಂವಿಧಾನ ನೀಡಿದೆ. ಜನರಿಂದ ಆಯ್ಕೆಯಾಗುವ ಪ್ರತಿನಿಧಿ ಅವರ ಕಷ್ಟಗಳಿಗೆ ಸ್ಪಂದಿಸಿ, ಜನಸಾಮಾನ್ಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸಹಕರಿಸಬೇಕು ಎಂದು ಉದ್ಯಮಿ ಶಿವುಮಠ ತಿಳಿಸಿದರು.

ADVERTISEMENT

ಪಟ್ಟಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮುಖಂಡರಾದ ಗೂಳಿಹಟ್ಟಿ ಕೃಷ್ಣಮೂರ್ತಿ, ದೇವಿಗೆರೆ ಮಲ್ಲಿಕಾರ್ಜುನ್, ರವಿಕುಮಾರ್, ಮಾರುತಿ ಹೊನ್ನೇನಹಳ್ಳಿ, ಗವಿ ಗೌತಮ್, ಕರ್ಣ, ಧನು, ಹೆಗ್ಗೆರೆ ಶಂಕರಪ್ಪ, ಕೈನಡು ಚಂದ್ರಪ್ಪ, ಎಂ.ಜಿ ದಿಬ್ಬದ ರಂಗಪ್ಪ, ದೊಡ್ಡಘಟ್ಟ ತಿಪ್ಪಯ್ಯ, ಪ್ರದೀಪ್, ನಾಕಿಕೆರೆ ತಿಪ್ಪಯ್ಯ, ಮೂಡಲಗಿರಿ, ಕರಿಬಸಪ್ಪ, ಲಕ್ಕಿಗುರು, ಅಣ್ಣಿ ರಾಜಾಹುಲಿ, ಪ್ರದೀಪ್, ಸಿದ್ದಪ್ಪ, ಪ್ರವೀಣ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.