ADVERTISEMENT

ಚಿತ್ರದುರ್ಗ | ಪದವಿ ಪ್ರದಾನ ಸಮಾರಂಭ 20 ರಂದು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 15:58 IST
Last Updated 17 ಸೆಪ್ಟೆಂಬರ್ 2024, 15:58 IST

ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಸೆ.20 ರಂದು ಬೆಳಿಗ್ಗೆ 11 ಗಂಟೆಗೆ ಬಿಟ್ಸ್‌ ಹೈಟೆಕ್ ಕಾಲೇಜಿನ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಕಾಲೇಜಿನ ಸಂಸ್ಥಾಪಕ ಕೆ.ಬಿ.ರವೀಂದ್ರ ತಿಳಿಸಿದರು.

‘ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಎಸ್‌.ಆರ್.ನಿರಂಜನ ಸಮಾರಂಭ ಉದ್ಘಾಟಿಸಲಿದ್ದು, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಬಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಅಪರಾಧಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ನಟರಾಜ್, ಸರ್ಕಾರಿ ವಿಜ್ಞಾನ ಕಾಲೇಜು ಸ್ನಾತಕೋತ್ತರ ಗಣಿತ ವಿಭಾಗದ ಸಹ ಪ್ರಾಧ್ಯಾಪಕ ಎನ್‌.ಬಿ.ಗಟ್ಟಿ, ಬಿಟ್ಸ್‌ ಹೈಟೆಕ್‌ ಕಾಲೇಜು ಪ್ರಾಂಶುಪಾಲೆ ಬಿ.ಎಂ.ಕವಿತಾ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 2014ರಲ್ಲಿ ನಮ್ಮ ಕಾಲೇಜು ಆರಂಭಗೊಂಡಿದ್ದು, ಕೋವಿಡ್ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ನಡೆಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿಯ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ’ ಎಂದರು.

ADVERTISEMENT

ನಿವೃತ್ತ ಪ್ರಾಧ್ಯಾಪಕ ನಟರಾಜ್‌, ಪ್ರಾಂಶುಪಾಲೆ ಜಿ.ಎಂ.ಕವಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.