ಚಿಕ್ಕಜಾಜೂರು: ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2025ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜು ಆಹ್ವಾನಿಸಲಾಗಿದೆ.
ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿ (ಎಸ್‌ಎಸ್‌ಎಲ್‌ಸಿ/ಪಿಯುಸಿ ), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳು, ಇತ್ತೀಚಿನ ಪಾಸ್‌ಪೋರ್ಟ್ ಸೈಜಿನ ಫೋಟೊ, ಮೊಬೈಲ್ ಸಂಖ್ಯೆ ಸಹಿತ ಸ್ವ ವಿಳಾಸವನ್ನು, ಸಿದ್ಧಿ ವಿನಾಯಕ ಪ್ರಾವಿಜನ್ ಸ್ಟೋರ್, ಕೆಎಸ್‌ಆರ್‌ಟಿಸಿ ಮಳಿಗೆ, ಹೊಳಲ್ಕೆರೆ ಇಲ್ಲಿಗೆ ಮೇ 25ರೊಳಗೆ ಅಂಚೆ ಮೂಲಕ ಅಥವಾ ನೇರವಾಗಿ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗೆ ಮೊಬೈಲ್: 63632 56449, 9008 813533, 9945445579, 73530 90860 ಸಂಪರ್ಕಿಸಬಹುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.