ಮೊಳಕಾಲ್ಮುರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇಲ್ಲಿನ ಅಬಕಾರಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದ ಮೆಹಬೂಬ್ ಸುಬಾನ್ ಬಂಧಿತ. ಆತ ತಾಲ್ಲೂಕಿನ ರಾಯಾಪುರ ಬಳಿಯ ಕೊಂಟೋಬಯ್ಯನಹಟ್ಟಿ ಕ್ರಾಸ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಕಂಡು ಪರಿಶೀಲಿಸಿದಾಗ ಅರ್ಧ ಕೆ.ಜಿ.ಯಷ್ಟು ಒಣ ಗಾಂಜಾ ಸಾಗಣೆ ಮಾಡುತ್ತಿರುವುದು ಕಾಣಸಿಕ್ಕಿದೆ ಎಂದು ತಾಲ್ಲೂಕು ಅಬಕಾರಿ ನಿರೀಕ್ಷಕ ಮೊಹಮದ್ ಸಾದತ್ ಉಲ್ಲಾ ತಿಳಿಸಿದ್ದಾರೆ.
ಆರೋಪಿಯನ್ನು ಮತ್ತು ಕೃತ್ಯಕ್ಕೆ ಬಳಕೆ ಮಾಡಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆ ವೇಳೆ ಸಿಬ್ಬಂದಿ ತಿಮ್ಮರಾಜು, ಅರುಣ್ ಕುಮಾರ್ ಮತ್ತು ಪರಶುರಾಮ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.