ಮೊಳಕಾಲ್ಮುರು: ಬೈಕ್‌ವೊಂದು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ತಾಲ್ಲೂಕಿನ ನಾಗಸಮುದ್ರ ಗೇಟ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150 ‘ಎ’ ನಲ್ಲಿ ಘಟನೆ ನಡೆದಿದ್ದು, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ದಮ್ಮಲದಿನ್ನಿ ಗ್ರಾಮದ ಪಾಪಣ್ಣ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಬಳ್ಳಾರಿ ಜಿಲ್ಲೆಯ ಚೆಳಗುರ್ಕಿಯ ಎಲ್ಲಪ್ಪ ಎಂದು ತಿಳಿದು ಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಬಳ್ಳಾರಿಗೆ ಬೈಕ್‌ನಲ್ಲಿ ಹೋಗುವಾಗ ಘಟನೆ ನಡೆದಿದೆ. ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.