ADVERTISEMENT

ಚಿತ್ರದುರ್ಗ| ಪೋಕ್ಸೊ ಪ್ರಕರಣದಲ್ಲಿ ಬಾಲಕನಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 17:25 IST
Last Updated 2 ಡಿಸೆಂಬರ್ 2022, 17:25 IST
   

ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 17 ವರ್ಷದ ಬಾಲಕನಿಗೆ ಬಾಲನ್ಯಾಯ ಮಂಡಳಿ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಶಿವಮೂರ್ತಿ ಶರಣರು ಸೇರಿ ನಾಲ್ವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಅ.13ರಂದು ಪ್ರಕರಣ ದಾಖಲಾಗಿತ್ತು. ನ್ಯಾಯಮಂಡಳಿಯ ಎದುರು ಶರಣಾದ ಬಾಲಕ, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT