
ಚಿತ್ರದುರ್ಗ ಬಸ್ ಅಪಘಾತ
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿ ಗುರುವಾರ ತಡರಾತ್ರಿ ನಡೆದ ಸ್ಲೀಪರ್ ಬಸ್ ದುರಂತಕ್ಕೆ ಮಹತ್ವದ ತಿರುವು ಸಿಕ್ಕಿದೆ. ಬಸ್‌ನಲ್ಲಿ ಸಾಗಿಸುತ್ತಿದ್ದ ಆಯಿಲ್ ಬಾಕ್ಸ್‌ಗಳೇ ಅಗ್ನಿಯ ತೀವ್ರತೆ ಹೆಚ್ಚಲು ಕಾರಣ ಎಂದು ಶಂಕಿಸಲಾಗಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಆದರೆ ಹತ್ತು ನಿಮಿಷದ ಬಳಿಕ ಬೆಂಕಿ ಹೊತ್ತಿಕೊಂಡಿದ್ದು, ಏಕಾಏಕಿ ಜ್ವಾಲೆ ವ್ಯಾಪಿಸಲು ಬಸ್‌ನೊಳಗೆ ಪತ್ತೆಯಾದ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಕಾರಣ ಎನ್ನಲಾಗುತ್ತಿದೆ.
ಆಯಿಲ್ ಬಾಕ್ಸ್‌ಗಳಿಂದಾಗಿ ಅಗ್ನಿಶಾಮಕ ಸಿಬ್ಬಂದಿಗೆ ಬೆಂಕಿ ನಿಯಂತ್ರಿಸಲು ಕಷ್ಟವಾಗಲು ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬಸ್‌ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಆಯಿಲ್ ಬಾಕ್ಸ್‌ಗಳು ಹೇಗೆ ಬಂದವು ಮತ್ತು ಇವುಗಳ ಸಾಗಣೆಗೆ ಅನುಮತಿ ಇತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದು ಬಸ್ ದುರಂತದ ತೀವ್ರತೆಯನ್ನು ಹೆಚ್ಚಿಸಿ, ಹೆಚ್ಚಿನ ಹಾನಿಗೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.