ADVERTISEMENT

ಚಿತ್ರದುರ್ಗ | ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 23 ಮೇ 2023, 7:22 IST
Last Updated 23 ಮೇ 2023, 7:22 IST
ಮೊಳಕಾಲ್ಮುರು ತಾಲ್ಲೂಕಿನ ತಮ್ಮೇನಹಳ್ಳಿ ಬಳಿ ಭಾನುವಾರ ತಡರಾತ್ರಿ ಅಪಘಾತಕ್ಕೀಡಾಗಿರುವ ಕಾರು
ಮೊಳಕಾಲ್ಮುರು ತಾಲ್ಲೂಕಿನ ತಮ್ಮೇನಹಳ್ಳಿ ಬಳಿ ಭಾನುವಾರ ತಡರಾತ್ರಿ ಅಪಘಾತಕ್ಕೀಡಾಗಿರುವ ಕಾರು   

ಮೊಳಕಾಲ್ಮುರು: ತಾಲ್ಲೂಕಿನ ತಮ್ಮೇನಹಳ್ಳಿ ಬಳಿಯ 150 ‘ಎ’ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 4 ಜನ ಗಾಯಗೊಂಡಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಹುಲ್ಸಗೂಡ ಗ್ರಾಮದ ನಾಗೇಂದ್ರ (50) ಮತ್ತು ಕಾರ್ತಿಕ್ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಪದ್ಮಾವತಿ, ಪ್ರಜ್ವಲ್, ಪೃಥ್ವಿ ಮತ್ತು ಕಾರು ಚಾಲಕ ಸೂರ್ಯಕಾಂತ್ ಅವರಿಗೆ ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಾರು ಬೆಂಗಳೂರಿನಿಂದ ಕಲಬುರಗಿ ಕಡೆ ಹೋಗುತ್ತಿತ್ತು. ಚಾಲಕನ ಅತಿವೇಗ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.