ADVERTISEMENT

ಚಿತ್ರದುರ್ಗ: ಸಿಲಿಂಡರ್‌ ಸ್ಫೋಟ; ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 15:16 IST
Last Updated 10 ಏಪ್ರಿಲ್ 2025, 15:16 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಚಿತ್ರದುರ್ಗ: ತಾಲ್ಲೂಕಿನ ಜಿ.ಆರ್‌.ಹಳ್ಳಿಯ ಎಲ್‌ಪಿಜಿ ವಿತರಣಾ ಕೇಂದ್ರದಲ್ಲಿ ಸಿಲಿಂಡರ್‌ ಸ್ಫೋಟಗೊಂಡು ವ್ಯಾನ್‌ ಚಾಲಕ ಮಾರುತಿ (35) ಬುಧವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸಿಲಿಂಡರ್‌ಗಳನ್ನು ಲೋಡ್‌ ಮಾಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿದೆ. ಈ ವೇಳೆ ಉಂಟಾದ ಸ್ಫೋಟದಲ್ಲಿ ಮಾರುತಿ ಮೃತಪಟ್ಟರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.