ADVERTISEMENT

ಚಿತ್ರದುರ್ಗ: ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಮೇ 2025, 16:10 IST
Last Updated 5 ಮೇ 2025, 16:10 IST
ಚಿತ್ರದುರ್ಗದ ನಗರಸಭೆ ಮುಂದೆ ಸೋಮವಾರ ಭಾರತ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು
ಚಿತ್ರದುರ್ಗದ ನಗರಸಭೆ ಮುಂದೆ ಸೋಮವಾರ ಭಾರತ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು   

ಚಿತ್ರದುರ್ಗ: ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಘಟಕದಿಂದ ಸೋಮವಾರ ‘ಸೂರಿಗಾಗಿ ಸಮರ’ ಘೋಷವಾಕ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ನಗರಸಭೆ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ‘ನಗರದಲ್ಲಿ ನಿವೇಶನ, ಮನೆಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ಬಡವರು ವಾಸಿಸುತ್ತಿದ್ದಾರೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಸುರೇಶ್‌ ಬಾಬು, ತಾಲ್ಲೂಕು ಕಾರ್ಯದರ್ಶಿ ಟಿ.ಆರ್‌.ಉಮಾಪತಿ, ಸಹ ಕಾರ್ಯದರ್ಶಿಗಳಾದ ಈ.ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‌ ತಾಜ್‌ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.