
ಹೊಸದುರ್ಗ: ನ್ಯಾಯಾಲಯವು ನೊಂದವರ ಬಾಳಿಗೆ ಬೆಳಕು ನೀಡುವ ದೇವಾಲಯವಾಗಬೇಕು. ಆಗ ಮಾತ್ರ ಜನರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಮತ್ತು ವಿಶ್ವಾಸ ಮೂಡುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಶಶಿಕಲಾ ಸಲಹೆ ನೀಡಿದರು.
ತಾಲ್ಲೂಕು ವಕೀಲರ ಸಂಘದ ವತಿಯಿಂದ ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಕೀಲರಿಂದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.
ಪ್ರತಿ ವಕೀಲ ವೃತ್ತಿ ಗೌರವ ಕಾಪಾಡಿಕೊಳ್ಳಬೇಕು. ಇಲ್ಲಿನ ವಕೀಲರು ಮತ್ತು ಸಿಬ್ಬಂದಿ ನೀಡಿದ ಸಹಕಾರವನ್ನು ಮರೆಯುವಂತಿಲ್ಲ ಎಂದು ಹೇಳಿದರು.
ವರ್ಗಾವಣೆಗೊಂಡ ಮತ್ತೊಬ್ಬ ನ್ಯಾಯಾಧೀಶರಾದ ಶಿವರಾಜು ಮಾತನಾಡಿದರು. ನ್ಯಾಯಧೀಶರಾದ ತ್ರಿನೇತ್ರ ಮತ್ತು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರವಿಕುಮಾರ್, ಸಂಘದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಸದಸ್ಯರು ಮತ್ತು ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.