ADVERTISEMENT

ಚಿತ್ರದುರ್ಗ | ವಿಶ್ವಕ್ಕೆ ಮಾದರಿಯಾದ ಹಳಕಟ್ಟಿ ವಚನ ಕ್ರಾಂತಿ: ಎನ್‌.ಮಮತಾ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 14:27 IST
Last Updated 2 ಜುಲೈ 2025, 14:27 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಚನ ಸಂರಕ್ಷಣಾ ದಿನಾಚರಣೆಯಲ್ಲಿ ಫ.ಗು.ಹಳಕಟ್ಟಿ ಭಾವಚಿತ್ರಕ್ಕೆ ಗಣ್ಯರು ನಮನ ಸಲ್ಲಿಸಿದರು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಚನ ಸಂರಕ್ಷಣಾ ದಿನಾಚರಣೆಯಲ್ಲಿ ಫ.ಗು.ಹಳಕಟ್ಟಿ ಭಾವಚಿತ್ರಕ್ಕೆ ಗಣ್ಯರು ನಮನ ಸಲ್ಲಿಸಿದರು    

ಚಿತ್ರದುರ್ಗ: ‘ಹಣ ಹಾಗೂ ಸಂಪತ್ತಿಗಾಗಿ ಫ.ಗು.ಹಳಕಟ್ಟಿ ವಚನಗಳ ಸಂಶೋಧನೆ ಕೈಗೊಳ್ಳಲಿಲ್ಲ. ವಕೀಲ ವೃತ್ತಿಯನ್ನು ಬಿಟ್ಟು, ಸತತ 60 ವರ್ಷ ವಚನ ಸಂಶೋಧನೆಗೆ ಜೀವನ ಮುಡಿಪಾಗಿಟ್ಟರು’ ಎಂದು ಪ್ರಾಂಶುಪಾಲರಾದ ಎನ್‌.ಮಮತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ವಚನ ಸಂರಕ್ಷಣಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.

‘ವಚನ ಸಾಹಿತ್ಯವನ್ನು ಪುನರುಜ್ಜೀವನಗೊಳಿಸಲು ಕಾರಣಕರ್ತರಾದ ಹಳಹಟ್ಟಿ ಅವರನ್ನು ಸಾಹಿತಿ ಸಿಂಪಗೆ ಲಿಂಗಣ್ಣ ‘ಕರ್ನಾಟಕದ ಮ್ಯಾಕ್ಸ್‌ಮಿಲ್ಲರ್‌’ ಎಂದು ಕರೆದಿದ್ದಾರೆ. ಸಾಹಿತಿ ಬಿ.ಎಂ.ಶ್ರೀಕಂಠಯ್ಯ ಅವರು ‘ವಚನ ಗುಮ್ಮಟ’ ಎಂದು ಹೊಗಳಿದ್ದಾರೆ. ಉತ್ತರ ಕರ್ನಾಟಕದ ಮನೆಗಳಲ್ಲಿ ದೇವರ ಜಗುಲಿಯಲ್ಲಿ ಪೂಜೆಗೆ ಇರಿಸಿದ್ದ ವಚನ ಸಾಹಿತ್ಯದ ತಾಳೆಗರಿಗಳನ್ನು ಸಂಗ್ರಹಿಸಿ ಪ್ರಕಟಿಸಿದರು’ ಎಂದು ತಿಳಿಸಿದರು.

ADVERTISEMENT

‘ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿದವರು ಹಳಕಟ್ಟಿಯವರು. ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಇವರ ಕಾರ್ಯದಿಂದ ಸಾಧ್ಯವಾಗಿದೆ’ ಎಂದು ಉಪವಿಭಾಗಾಧಿಕಾರಿ ಮೆಹಬೂಬ್‌ ಜಿಲಾನಿ ಖುರೇಷಿ ತಿಳಿಸಿದರು.

ಗ್ಯಾರಂಟಿ ಯೋಜನಾ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ, ತಹಶೀಲ್ದಾರ್‌ ನರಸಿಂಹಮೂರ್ತಿ, ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್‌ ಕಾರ್ಯದರ್ಶಿ ಷಣ್ಮುಖಪ್ಪ, ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್‌.ಲಕ್ಷ್ಮಣ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.