ಉದ್ಯೋಗ
ಚಿತ್ರದುರ್ಗ: ಜಿಲ್ಲಾಡಳಿತ, ಕೌಶಲಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ– ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ ಅಡಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ, ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸುವರು.
ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತಾ) ನಾಯ್ಕ ಭಾಗವಹಿಸುವರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕ ಆರ್.ಸ್ನೇಹಲ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.