ADVERTISEMENT

ಚಿತ್ರದುರ್ಗ: ಖಾಲಿ ಹುದ್ದೆಗೆ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 6:27 IST
Last Updated 15 ಅಕ್ಟೋಬರ್ 2025, 6:27 IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು 
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು     

ಚಿತ್ರದುರ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಯುವಜನತೆ ನಿರುದ್ಯೋಗದಿಂದ ಕಂಗಾಲಾಗಿದ್ದಾರೆ. ಉದ್ಯೋಗ ಪಡೆಯಲು ಅವಿರತ ಅಧ್ಯಯನ, ಪರಿಶ್ರಮ ನಡೆಸಿದರೂ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಬೇಸತ್ತಿದ್ದಾರೆ. ಭವಿಷ್ಯದ ಬಗ್ಗೆ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಯಾವುದೇ ನೇಮಕಾತಿ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನೇಮಕಾತಿಗಳಲ್ಲಿ ಅಕ್ರಮ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ ನಾಲೈದು ವರ್ಷಗಳಿಂದ ನೇಮಕಾತಿಗಳು ನಡೆಯದ ಹಿನ್ನೆಲೆಯಲ್ಲಿ ಎಲ್ಲಾ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನು ಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಬೇಕು. ಸರ್ಕಾರಿ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಕೈಬಿಟ್ಟು ಎಲ್ಲಾ ಹುದ್ದೆಗಳನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಇತ್ತೀಚೆಗೆ ಕೆಇಎ ನೇಮಕಾತಿ ಪ್ರಕಟಣೆ ಹೊರಡಿಸಿದ್ದು ನಿಗದಿಪಡಿಸಿರುವ  ಅರ್ಜಿ ಶುಲ್ಕ ದುಬಾರಿಯಾಘಿದೆ. ಅರ್ಜಿ ಶುಲ್ಕವನ್ನು ಕಡಿತಗೊಳಿಸಬೇಕು. ಖಾಲಿಯಿರುವ ಎಲ್ಲಾ ಶಿಕ್ಷಕರ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕ ಕೆ.ಕೃಷ್ಣ, ಸದಸ್ಯರಾದ ರವಿಕುಮಾರ್, ತಿಪ್ಪೇಸ್ವಾಮಿ, ಭವಾನಿ, ಕೊಟ್ರೇಶ್, ನಯನಾ, ರಘು, ಮಲ್ಲಿಕಾರ್ಜುನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.