ADVERTISEMENT

ಹೊಳಲ್ಕೆರೆ | ಹೃದಯ ಉಚಿತ ತಪಾಸಣಾ ಶಿಬಿರ ಇಂದು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 15:20 IST
Last Updated 15 ಸೆಪ್ಟೆಂಬರ್ 2024, 15:20 IST

ಹೊಳಲ್ಕೆರೆ: ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಾವಣೆಗೆರೆಯ ನಾರಾಯಣ ಹೆಲ್ತ್ ಸೂಪರ್ ಸ್ಪಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಸೆ.16 ರಂದು ತಾಲ್ಲೂಕಿನ ತಿರುಮಲಾಪುರ (ಎಮ್ಮೆಹಟ್ಟಿ) ಸರ್ಕಾರಿ ಶಾಲೆಯ ಆವರಣದಲ್ಲಿ ಹೃದಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ ತಿಳಿಸಿದ್ದಾರೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದ್ದು, ನುರಿತ ತಜ್ಞ ವೈದ್ಯರು ತಪಾಸಣೆ ನಡೆಸುವರು. ಸುತ್ತಲಿನ ಗ್ರಾಮಸ್ಥರು ಭಾಗವಹಿಸಬಹುದು ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT