ADVERTISEMENT

4ರಂದು ನಾಮಪತ್ರ ಸಲ್ಲಿಕೆ: ಬಿ.ಎನ್.ಚಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2024, 15:40 IST
Last Updated 1 ಏಪ್ರಿಲ್ 2024, 15:40 IST
ಹೊಳಲ್ಕೆರೆಯ ಪ್ರಸನ್ನ ಗಣಪತಿ ದೇವಾಲಯಕ್ಕೆ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ ನೀಡಿದರು.
ಹೊಳಲ್ಕೆರೆಯ ಪ್ರಸನ್ನ ಗಣಪತಿ ದೇವಾಲಯಕ್ಕೆ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ ನೀಡಿದರು.   

ಹೊಳಲ್ಕೆರೆ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಸೋಮವಾರ ಪಟ್ಟಣದ ಪ್ರಸನ್ನ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪರ ಅಲೆ ಇದ್ದು, ಪಕ್ಷ ಗೆಲುವು ಸಾಧಿಸಲಿದೆ. ಬಿಜೆಪಿ ಆಡಳಿತದಲ್ಲಿ ಆದ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದು, ಜನ ಬದಲಾವಣೆ ಬಯಸಿದ್ದಾರೆ. ಬಿಜೆಪಿಯವರು ಕೇವಲ ಧರ್ಮದ ಆಧಾರದ ಮೇಲೆ ಚುನಾವಣೆ ನಡೆಸಲು ಹೊರಟಿದ್ದು, ಫಲ ನೀಡುವುದಿಲ್ಲ. ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು.

‘ಏ. 4ರಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಚಿತ್ರದುರ್ಗದ ನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ನಂತರ ಮಾಧ್ಯಮಿಕ ಶಾಲೆಯ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ಹೆಚ್ಚಿನ ಕಾರ್ಯಕರ್ತರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು. 

ADVERTISEMENT

ಮಾಜಿ ಸಚಿವ ಎಚ್.ಆಂಜನೇಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಶಿವಕುಮಾರ್, ಎಸ್.ಜೆ.ರಂಗಸ್ವಾಮಿ, ಕಾಟಿಹಳ್ಳಿ ಶಿವಕುಮಾರ್, ಎಚ್.ಡಿ.ರಂಗಯ್ಯ, ಗೋಡೆಮನೆ ಹನುಮಂತಪ್ಪ, ಚನ್ನಕೇಶವ, ಅಲೀಮುಲ್ಲಾ ಷರೀಫ್, ಪಿ.ಆರ್.ಶಿವಕುಮಾರ್, ಲೋಹಿತ್ ಕುಮಾರ್, ರುದ್ರಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಪಾಡಿಗಟ್ಟೆ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.