ADVERTISEMENT

ಚಿತ್ರದುರ್ಗ: ಶಾಲಾ ಕಟ್ಟಡದಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 5:48 IST
Last Updated 16 ಫೆಬ್ರುವರಿ 2026, 5:48 IST
<div class="paragraphs"><p>ಕ್ರೊಟ್ರೇಶ್</p></div>

ಕ್ರೊಟ್ರೇಶ್

   

ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರದ ಡಿವಿಎಸ್ ಶಾಲೆಯ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಬಿದ್ದು ಸೋಮವಾರ ಆತ್ಮಹತ್ಯೆ ಮಾಡಿಕೊಮಡಿದ್ದಾನೆ.

10ನೇ ತರಗತಿ ಓದುತ್ತಿದ್ದ ಕ್ರೊಟ್ರೇಶ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಟ್ಟಡದಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ADVERTISEMENT

ವಿದ್ಯಾರ್ಥಿಯ ತಲೆ ನೇರವಾಗಿ ನೆಲಕ್ಕೆ ಬಿದ್ದಿರುವ ಕಾರಣ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭರಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.