ADVERTISEMENT

ಚಿತ್ರದುರ್ಗ: ರಾಹುಲ್ ಭೇಟಿಗೂ ಮುನ್ನ ಮಠದ ಆವರಣದಲ್ಲಿ ಕಾಂಗ್ರೆಸ್ ಮುಖಂಡರ ವಾಗ್ವಾದ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 5:29 IST
Last Updated 3 ಆಗಸ್ಟ್ 2022, 5:29 IST
ಚಿತ್ರದುರ್ಗ: ರಾಹುಲ್ ಭೇಟಿಗೂ ಮುನ್ನ ಮಠದ ಆವರಣದಲ್ಲಿ ಕಾಂಗ್ರೆಸ್ ಮುಖಂಡರ ವಾಗ್ವಾದ
ಚಿತ್ರದುರ್ಗ: ರಾಹುಲ್ ಭೇಟಿಗೂ ಮುನ್ನ ಮಠದ ಆವರಣದಲ್ಲಿ ಕಾಂಗ್ರೆಸ್ ಮುಖಂಡರ ವಾಗ್ವಾದ   

ಚಿತ್ರದುರ್ಗ: ಮಠಾಧೀಶರ ಸಭೆಗೆ ಇಲ್ಲಿನ ಮುರುಘಾ ಮಠಕ್ಕೆ ಭೇಟಿ ನೀಡಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಂವಾದದಲ್ಲಿ ಪಾಲ್ಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆಯಿತು.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಬರುತ್ತಿದ್ದು, ಮಳೆ ಕಾರಣಕ್ಕೆ ವಿಳಂಬವಾಗುತ್ತಿದೆ. ಬೆಳಿಗ್ಗೆ 11 ರಿಂದ 11.50ರವರೆಗೆ ಸಭೆ ನಿಗದಿಯಾಗಿದೆ.

ರಾಹುಲ್ ಭೇಟಿ ಹಿನ್ನಲೆಯಲ್ಲಿ ಮಠಕ್ಕೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಮಠದ ಪ್ರವೇಶ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ವತಿಯಿಂದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪಾಸ್ ವಿತರಿಸುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಪರಸ್ಪರ ವಾಗ್ವಾದ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಾಸಲು ಸತೀಶ್ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಏರುಧ್ವನಿಯಲ್ಲಿ ಗಲಾಟೆ ಮಾಡಿಕೊಂಡರು. ಪೊಲೀಸರು ಮಧ್ಯ ಪ್ರವೇಶಿಸಿ ಸಾಸಲು ಸತೀಶ್ ಅವರು ಸಭಾಂಗಣಕ್ಕೆ ತೆರಳಲು ಅವಕಾಶ ಮಾಡಿಕೊಟ್ಟರು. ಕಾಂಗ್ರೆಸ್ ಮುಖಂಡ ಮುರಳಿಧರ ಹಾಲಪ್ಪ ವಿರುದ್ಧ ಸತೀಶ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.