(ಸಾಂದರ್ಭಿಕ ಚಿತ್ರ)
ಚಿತ್ರದುರ್ಗ: ನಗರದ ರಾಷ್ಟ್ರೀಯ ಹೆದ್ದಾರಿ- 48, ಗೋನೂರು ರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ದಲಿತ ಸಂಘಟನೆ ಸದಸ್ಯರು ಆರೋಪಿಸಿದ್ದಾರೆ.
ಗೋನೂರು ರಸ್ತೆಯ ಜಮೀನಿನಲ್ಲಿ ಸೋಮವಾರ ಅಪರಿಚಿತ ಶವ ಪತ್ತೆಯಾಗಿತ್ತು. ಪ್ರಕರಣ ಬೆನ್ನುಹತ್ತಿದ ಪೊಲೀಸರು ವಿದ್ಯಾರ್ಥಿನಿಯ ಗುರುತು ಪತ್ತೆ ಮಾಡಿದ್ದಾರೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ ಓದುತ್ತಿದ್ದ ವಿದ್ಯಾರ್ಥಿನಿ ಕೊಲೆಯಾದವರು. ಅವರು ಬಾಲಕಿಯರ ವಸತಿ ನಿಲಯದಲ್ಲಿ ಇದ್ದರು.
ಕೊಲೆ ಮಾಡಿ ನಂತರ ಬೆಂಕಿ ಹಚ್ಚಿದ್ದಾರೆ. ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪ್ರತಿಭಟನೆ: ವಿದ್ಯಾರ್ಥಿನಿ ಹತ್ಯೆ ಖಂಡಿಸಿ ದಲಿತ ಸಂಘರ್ಷ ಸಮಿತಿ, ಎಬಿವಿಪಿ, ಕರುನಾಡ ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದಕ್ಕೂ ಮೊದಲು ವಿದ್ಯಾರ್ಥಿಯ ಸಂಬಂಧಿಕರು, ಗ್ರಾಮಸ್ಥರು ಜಿಲ್ಲಾಸ್ಪತ್ರೆ ಎದುರಿನ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.