ADVERTISEMENT

ಚಿತ್ರದುರ್ಗ: ಕಾನೂನು ವಿದ್ಯಾರ್ಥಿಗಳಿಗೆ ಜಿಲ್ಲಾ ವಕೀಲರ ಸಂಘ ಬೆಂಬಲ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 4:55 IST
Last Updated 28 ಡಿಸೆಂಬರ್ 2021, 4:55 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಕಾನೂನು ವಿಶ್ವವಿದ್ಯಾಲಯ ಹಾಗೂ ಕಾನೂನು ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಗೆಹರಿಸಲು ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜಿಲ್ಲಾ ವಕೀಲರ ಸಂಘ ಒತ್ತಾಯಿಸಿದೆ.

ಕಾನೂನು ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ವಕೀಲರ ಸಂಘದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಐದು ಹಾಗೂ ಮೂರು ವರ್ಷದ ಕಾನೂನು ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಕಾನೂನು ವಿಶ್ವವಿದ್ಯಾಲಯದ ನಿರ್ಧಾರಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಸಮಾಧಾನವಿದೆ. ಈ ಬಗ್ಗೆ ರಾಜ್ಯಪಾಲರು ಗಮನ ಹರಿಸಬೇಕು. ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಕಾನೂನು ವಿಶ್ವವಿದ್ಯಾಲಯ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದರಿಂದ ಕಾನೂನು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾದ ನಿಲುವುಗಳು ಹೊರಬರುತ್ತಿವೆ. ಸರ್ಕಾರ ವಿದ್ಯಾರ್ಥಿಗಳಿಗೆ ಸ್ಪಂದಿಸದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವು ಯಾದವ್‌, ಉಪಾಧ್ಯಕ್ಷ ಜಿ.ಸಿ.ದಯಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.