ಚಿತ್ರದುರ್ಗ: ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿಯ ಬಿ.ಎಸ್.ಮಂಜುಳಾ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಜ.4ರಂದು ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ.34 ವರ್ಷದ ಮಂಜುಳಾ ಅವರುಒಂದು ಗಂಡು ಹಾಗೂ ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಮೂರು ನವಜಾತ ಶಿಶು ಹಾಗೂ ತಾಯಿ ಆರೋಗ್ಯವಾಗಿದ್ದು, ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು.
ಆಸ್ಪತ್ರೆಯ ತಜ್ಞರ ವೈದ್ಯರ ತಂಡ ತ್ರಿವಳಿ ಶಿಶುಗಳ ಆರೋಗ್ಯದ ಮೇಲೆ ನಿಗಾವಹಿಸಿತ್ತು. ಮೂವರು ಮಕ್ಕಳು ಆರೋಗ್ಯವಾಗಿರುವುದು ಖಚಿತಪಡಿಸಿಕೊಂಡ ಬಳಿಕ ಆಸ್ಪತ್ರೆಯಿಂದ ತಾಯಿ, ಮಕ್ಕಳನ್ನು ಬಿಳ್ಕೋಡಲಾಯಿತು.ಪತಿ ರಂಗಸ್ವಾಮಿ ಹಾಗೂ ಮಂಜುಳಾ ದಂಪತಿಗೆ ಆರು ವರ್ಷಗಳ ಹಿಂದೆ ಹೆಣ್ಣು ಮಗು ಜನಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.