ADVERTISEMENT

ಚಿತ್ರದುರ್ಗ: ಹಿರಿಯೂರು ಸಮೀಪ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 5:56 IST
Last Updated 14 ನವೆಂಬರ್ 2020, 5:56 IST
ಅಪಘಾತವಾದ ಕಾರು
ಅಪಘಾತವಾದ ಕಾರು   

ಹಿರಿಯೂರು: ತಾಲ್ಲೂಕಿನ ಪಟ್ರೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾವೇರಿಯ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಶ್ರುತಿ (03), ಜ್ಯೋತಿ (25), ಜಾಗೃತಿ (04), ದ್ಯಾಮಣ್ಣ (24) ವರ್ಷ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್, ಇಂಡಿಕಾ ಕಾರು, ಮಾರುತಿ ಆಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿ ಇದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.