ADVERTISEMENT

30ರೊಳಗೆ ನೀರು ಹರಿಸಲು ಆಗ್ರಹ

ವಿಶ್ವೇಶ್ವರಯ್ಯ ನೀರಾವರಿ ನಿಗಮದ ಕಚೇರಿಗೆ ಬೀಗ ಜಡಿದು ಪ್ರತಿಭಟಿಸುವ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 3:12 IST
Last Updated 26 ಜುಲೈ 2022, 3:12 IST
ವಾಣಿವಿಲಾಸ ಜಲಾಶಯಕ್ಕೆ ಭದ್ರಾ ನೀರನ್ನು ಹರಿಸಲು ಒತ್ತಾಯಿಸಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಹಿರಿಯೂರಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ವಾಣಿವಿಲಾಸ ಜಲಾಶಯಕ್ಕೆ ಭದ್ರಾ ನೀರನ್ನು ಹರಿಸಲು ಒತ್ತಾಯಿಸಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಹಿರಿಯೂರಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.   

ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯಕ್ಕೆ ಜುಲೈ 30ರ ಒಳಗೆ ಭದ್ರಾ ಜಲಾಶಯದಿಂದ ನೀರು ಹರಿಸದಿದ್ದರೆ ಅಂದು ನಗರದಲ್ಲಿರುವ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಕಚೇರಿಗೆ ಬೀಗ ಜಡಿದು ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.

ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೀರು ಬಿಡುಗಡೆಗೆ ಆಗ್ರಹಿಸಿ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿಯನ್ನು ಕೆಲಹೊತ್ತು ತಡೆದು ಪ್ರತಿಭಟನೆ ನಡೆಸಿದ ನಂತರ ತಹಶೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

‘ಸಾರ್ವಜನಿಕರ ಸೇವಕರಾಗಿರುವ ಅಧಿಕಾರಿಗಳು ಸಬೂಬು ಹೇಳದೆ ನೀರು ಬಿಡುವ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ಪಾಲಿಸಬೇಕು. ಯಾರ ಒತ್ತಡಕ್ಕೂ ಮಣಿಯದೆ ನಾಲ್ಕು ತಿಂಗಳು ನಿರಂತರವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ರೈತರ ತಾಳ್ಮೆಯ ಕಟ್ಟೆ ಒಡೆಯುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಶಿವಣ್ಣ, ತಿಮ್ಮಾರೆಡ್ಡಿ, ಸೈಯದ್ ಮುನ್ನಾ, ಹನುಮಂತರಾಯ, ಹನುಮಂತಪ್ಪ, ಟಿ. ಚಂದ್ರಪ್ಪ, ಎನ್. ನಾಗೇಂದ್ರಪ್ಪ, ಷಣ್ಮುಖಪ್ಪ, ಕರಿಯಣ್ಣ, ಯಲ್ಲಪ್ಪ, ಎಚ್. ರಂಗಸ್ವಾಮಿ, ಎಚ್. ರಾಮಯ್ಯ, ತಿಮ್ಮಣ್ಣ, ಆದಿರಾಳು ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.