ಚಿತ್ರದುರ್ಗ: ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ– 48ರಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಈ ಕುರಿತ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
10ಕ್ಕೂ ಹೆಚ್ಚು ಮಂದಿ ಯುವಕರು ರಾಷ್ಟ್ರೀಯ ಹೆದ್ದಾರಿ, ಸರ್ವೀಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ್ದಾರೆ. ಬೈಕ್‌ಗೆ ರಾಷ್ಟ್ರೀಯ ಧ್ವಜ ಅಳವಡಿಸಿರುವ ಕಾರಣ ಸ್ವಾತಂತ್ರ್ಯ ದಿನಾಚರಣೆಯ ದಿನ ವ್ಹೀಲಿಂಗ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸಾರ್ವಜನಿಕರ ಎದುರು, ಹೆದ್ದಾರಿ ವಾಹನಗಳ ಓಡಾಟದ ನಡುವೆಯೇ ಪುಂಡಾಟ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
‘ವಿಡಿಯೊ ಸಂಗ್ರಹಿಸಲಾಗಿದ್ದು ಯುವಕರನ್ನು ಗುರುತಿಸಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.