ಚಿತ್ರದುರ್ಗ: ಕೋವಿಡ್–19ನಿಂದ ಬಳಲುತ್ತಿದ್ದ 50 ವರ್ಷದ ಮಹಿಳೆಯೊಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟರು.
ಕೋವಿಡ್‌ಗೆ ಜಿಲ್ಲೆಯಲ್ಲಿ ಮೃತಪಟ್ಟರವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗದ ಇಬ್ಬರು, ಹಿರಿಯೂರು ಹಾಗೂ ಚಳ್ಳಕೆರೆ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗದ ತಾಜ್‌ಪೀರ್ ನಗರದ ಮಹಿಳೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಜುಲೈ 15ರಂದು ಇವರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆಯಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.