ADVERTISEMENT

ರೋಗ ತಡೆಗೆ ಕೈತೊಳೆಯುವುದು ಅವಶ್ಯ: ಯೋಜನಾ ನಿರ್ದೇಶಕ ಕೆ.ಜಯಲಕ್ಷ್ಮಿ

ಜಿ.ಪಂ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 6:03 IST
Last Updated 16 ಅಕ್ಟೋಬರ್ 2025, 6:03 IST
ಚಿತ್ರದುರ್ಗದ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ವಿಶ್ವ ಕೈ ತೊಳೆಯುವ ದಿನ ಆಚರಿಸಲಾಯಿತು
ಚಿತ್ರದುರ್ಗದ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ವಿಶ್ವ ಕೈ ತೊಳೆಯುವ ದಿನ ಆಚರಿಸಲಾಯಿತು   

ಚಿತ್ರದುರ್ಗ: ‘ರೋಗ ತಡೆಗಟ್ಟುವಿಕೆ, ಹರಡುವಿಕೆಯನ್ನು ತಡೆಗಟ್ಟಲು ಕೈ ತೊಳೆಯುವುದು ಅತ್ಯಂತ ಪರಿಣಾಮಕಾರಿ’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೆ.ಜಯಲಕ್ಷ್ಮಿ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಸಮುದಾಯ ಮತ್ತು ಮಕ್ಕಳಲ್ಲಿ ಕೈ ನೈರ್ಮಲ್ಯದ ಮಹತ್ವದ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಅತ್ಯವಶ್ಯವಿದೆ’ ಎಂದು ತಿಳಿಸಿದರು.

‘ಶುದ್ಧ ಕುಡಿಯುವ ನೀರು, ನಿರ್ಮಲ ಪರಿಸರ ಹಾಗೂ ಉತ್ತಮ ಸ್ವಚ್ಛತೆಯ ಅಭ್ಯಾಸಗಳು ಜನ ಜೀವನ ಸುಧಾರಣೆಯ ಪ್ರಮುಖ ಅಂಶಗಳಾಗಿವೆ. ಊಟಕ್ಕೆ ಮೊದಲು, ಶೌಚಕ್ಕೆ ಹೋದ ನಂತರ ಸೋಪಿನಿಂದ ಕೈ ತೊಳೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸುಮಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸ್ವಚ್ಛ ಭಾರತ್‌ ಮಿಷನ್‌ ಜಿಲ್ಲಾ ಸಮಾಲೋಚಕರಾದ ಪ್ರಮೀಳಾ, ಬಿ.ಸಿ.ನಾಗರಾಜ್‌, ಶಶಿಧರ್, ವಿನಯ್‌ ಕುಮಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.