ADVERTISEMENT

ದಾವಣಗೆರೆ, ಹೊನ್ನಾಳಿಗೆ ಸಮಗ್ರ ಪ್ರಶಸ್ತಿ

ದಾವಣಗೆರೆ ವಿವಿ ಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 2:17 IST
Last Updated 5 ಫೆಬ್ರುವರಿ 2021, 2:17 IST
ಹಿರಿಯೂರಿನಲ್ಲಿ ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಸವರಾಜ ಬಣಕಾರ ಬಹುಮಾನ ವಿತರಿಸಿದರು.
ಹಿರಿಯೂರಿನಲ್ಲಿ ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಸವರಾಜ ಬಣಕಾರ ಬಹುಮಾನ ವಿತರಿಸಿದರು.   

ಹಿರಿಯೂರು: ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೇತೃತ್ವದಲ್ಲಿ ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಪುರುಷ ಮತ್ತು ಮಹಿಳೆಯರ ಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ವಿಭಾಗದಲ್ಲಿ ಹೊನ್ನಾಳಿಯ ಎಸ್‌ಎಂಎಸ್ ಪ್ರಥಮ ದರ್ಜೆ ಕಾಲೇಜು ಸಮಗ್ರ ಪ್ರಶಸ್ತಿ ಪಡೆದವು.

ಪುರುಷ ವಿಭಾಗದಲ್ಲಿ ದಾವಣಗೆರೆ ಕಾಲೇಜಿನ ಧೃವ‌, ಹೊನ್ನಾಳಿಯ ಶೈಲಾ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅಖಿಲ ಭಾರತ ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು.

ಪುರುಷರ ವಿಭಾಗದಲ್ಲಿ ಜಾವೀದ್ (ಹರಪನಹಳ್ಳಿ), ಎಂ. ಪುಂಡಲೀಕ (ದಾವಣಗೆರೆ ವಿ.ವಿ), ರವಿ (ಮೊಳಕಾಲ್ಮುರು), ತಿಪ್ಪೇಸ್ವಾಮಿ (ಚಿತ್ರದುರ್ಗ), ವೆಂಕಟೇಶ್ (ದಾವಣಗೆರೆ) ಹಾಗೂ ಮಹಿಳೆಯರ ವಿಭಾಗದಲ್ಲಿ ರಶ್ಮಿ (ಹೊನ್ನಾಳಿ), ಶೀತಲ್ (ದಾವಣಗೆರೆ) ಹಾಗೂ ಪೂಜಾ (ಹಾರನಹಳ್ಳಿ) ಮುಂದಿನ ಹಂತದ ಸ್ಪರ್ಧೆಗೆ ಅರ್ಹತೆ ಪಡೆದರು.

ADVERTISEMENT

ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಓಟದ ಸ್ಪರ್ಧೆಗೆ ಸಿಪಿಐ ರಾಘವೇಂದ್ರ ಚಾಲನೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಸವರಾಜ ಬಣಕಾರ ವಿಜೇತರಿಗೆ ಬಹುಮಾನ ವಿತರಿಸಿದರು. ಪ್ರಾಂಶುಪಾಲ ಡಾ.ಧರಣೇಂದ್ರಯ್ಯ ಅಧ್ಯಕ್ಷತೆವಹಿಸಿದ್ದರು.

ರೋಟರಿ ಕ್ಲಬ್‌ ಅಧ್ಯಕ್ಷ ಎಚ್.ಎಸ್. ಸುಂದರರಾಜ್, ನಿವೃತ್ತ ಪ್ರಾಂಶುಪಾಲ ನಾಗಣ್ಣ, ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಮಕ್ಸೂದ್, ಎಚ್.ತಿಪ್ಪೇಸ್ವಾಮಿ, ಬಸವರಾಜ್, ಡಾ.ವೀರೇಂದ್ರ, ಗಂಗಾಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.