ಮೊಳಕಾಲ್ಮುರು: ತಾಲ್ಲೂಕಿನ ಯರೇನಹಳ್ಳಿಯಲ್ಲಿನ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗೆ ಜೂನ್ ವೇಳೆಗೆ ಚ ಮಾಡುವುದಾಗಿ ನೀಡಿದ್ದ ಭರವಸೆ ಈಡೇರಿಲ್ಲ.
ವಸತಿ ಶಾಲೆ ಆರಂಭವಾಗಿ 12 ವರ್ಷ ಕಳೆದಿದೆ. 5 ವರ್ಷದ ಹಿಂದೆ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಕಂಪ್ಯೂಟರ್ ಲ್ಯಾಬ್, ಕಾಯಂ ಕಂಪ್ಯೂಟರ್ ಶಿಕ್ಷಕರ ವ್ಯವಸ್ಥೆಯಿದೆ. ಆದರೆ, ಕಂಪ್ಯೂಟರ್‌ಗಳನ್ನು ಮಾತ್ರ ಇಲಾಖೆ ನೀಡಿಲ್ಲ. ಇದರಿಂದ ಕಂಪ್ಯೂಟರ್ ಶಿಕ್ಷಣ ಕಲಿಕೆಗೆ ಹಿನ್ನಡೆಯಾಗಿದೆ. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.
ವರದಿಯಿಂದ ಎಚ್ಚೆತ್ತುಕೊಂಡ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜೂನ್ ವೇಳೆಗೆ ಕಂಪ್ಯೂಟರ್ ವ್ಯವಸ್ಥೆ ಮಾಡಿ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ. ಇದರಿಂದ ಈ ವರ್ಷವೂ ಸಮಸ್ಯೆ ಮುಂದುವರಿಯುವ ಆತಂಕವಿದೆ ಎಂದು ಪಾಲಕರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.