ADVERTISEMENT

ಬಿಜೆಪಿ ವೈಫಲ್ಯವನ್ನು ಮತದಾರರಿಗೆ ತಲುಪಿಸಿ

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 15:11 IST
Last Updated 12 ಅಕ್ಟೋಬರ್ 2021, 15:11 IST
ಚಿತ್ರದುರ್ಗ ಸಮೀಪದ ಮಠದ ಕುರುಬರಹಟ್ಟಿಯಲ್ಲಿ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರಾಜೆಕ್ಟ್‌ ಪ್ರತಿನಿಧಿ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಮಾತನಾಡಿದರು.
ಚಿತ್ರದುರ್ಗ ಸಮೀಪದ ಮಠದ ಕುರುಬರಹಟ್ಟಿಯಲ್ಲಿ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರಾಜೆಕ್ಟ್‌ ಪ್ರತಿನಿಧಿ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಮಾತನಾಡಿದರು.   

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಶೂನ್ಯ ಸಾಧನೆ ಮಾಡಿದೆ. ಬಿಜೆಪಿಯ ಆಡಳಿತ ವೈಫಲ್ಯಗಳನ್ನು ಪ್ರತಿ ಮನೆಗೂ ತಲುಪಿಸಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಇಲ್ಲಿಗೆ ಸಮೀಪದ ಮಠದ ಕುರುಬರಹಟ್ಟಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಾಜೆಕ್ಟ್‌ ಪ್ರತಿನಿಧಿ ಸಭೆಯಲ್ಲಿ ಅವರು ಮಾತನಾಡಿದರು.

‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವುದರ ಜೊತೆಗೆ ಸಾಕಷ್ಟು ತ್ಯಾಗವನ್ನು ಕಾಂಗ್ರೆಸ್ ಮಾಡಿದೆ. ಜವಾಹರಲಾಲ್‌ ನೆಹರೂ ಅವರಿಂದ ಮನಮೋಹನ್‌ ಸಿಂಗ್‌ ವರೆಗೆ ಹಲವು ಪ್ರಧಾನಿಗಳ ಕಾಲದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಭವ್ಯ ಅಣೆಕಟ್ಟೆ, ಕಾರ್ಖಾನೆಗಳು ನಿರ್ಮಾಣವಾಗಿವೆ. ದುಡಿಯುವ ಕೈಗಳಿಗೆ ಕೆಲಸ ಸಿಕ್ಕಿದೆ. ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ’ ಎಂದು ಹೇಳಿದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಶೂನ್ಯ ಸಾಧನೆ ಮಾಡಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಯುವಸಮೂಹ ಉದ್ಯೋಗವಿಲ್ಲದೇ ಸಂಕಷ್ಟಕ್ಕೆ ಸಿಲುಕಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಜನರು ಕಿತ್ತೆಸೆಯಬೇಕು’ ಎಂದು ಮನವಿ ಮಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ. ಜಗದೀಶ್ ಮಾತನಾಡಿ, ‘ಮಹಾತ್ಮ ಗಾಂಧೀಜಿ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಗೋಡ್ಸೆ ಸಂತತಿಗೆ ಸೇರಿದ ಬಿಜೆಪಿಗರಿಂದ ದೇಶಭಕ್ತಿಯ ಪಾಠ ಕಲಿಯುವ ಅಗತ್ಯವಿಲ್ಲ. 60 ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ದೇಶಕ್ಕೆ ನೀಡಿದ ಕೊಡುಗೆ ಅಪಾರ. 20 ಅಂಶಗಳ ಕಾರ್ಯಕ್ರಮ, ಪಂಚವಾರ್ಷಿಕ ಯೋಜನೆ ಅಭಿವೃದ್ಧಿಯ ಕ್ರಾಂತಿ ಮಾಡಿದವು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್‌.ನರಸಿಂಹರಾಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಿಕಾಂತ್‌, ಮುಖಂಡರಾದ ಓ.ಶಂಕರ್, ಎ.ಎಂ. ಮರುಳಾರಾಧ್ಯ, ಮಹಡಿ ಶಿವಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.