ಸಿರಿಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಶ್ರೀಗಳಿಗೆ ಫಲಪುಷ್ಪ ನೀಡಿ ಗೌರವಿಸಿದರು. ಶ್ರೀಗಳು ಪ್ರಭಾ ಅವರನ್ನು ಆಶೀರ್ವದಿಸಿದರು.
ಪ್ರಭಾ ಮಲ್ಲಿಕಾರ್ಜುನ್ ಪುತ್ರ ಸಮರ್ಥ ಶಾಮನೂರು, ಪುತ್ರಿ ಶ್ರೇಷ್ಠ ಶಾಮನೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಜಿ. ಬಸವನ ಗೌಡ್ರು, ಎಸ್.ಎಸ್. ಹೈಟೆಕ್ ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ. ಬಿ.ಎಸ್ ಪ್ರಸಾದ್, ವೈದ್ಯಕೀಯ ನಿರ್ದೇಶಕ ಡಾ. ಅರುಣ್ ಅಜ್ಜಪ್ಪ, ಬಾಪೂಜಿ ಮಕ್ಕಳ ಆಸ್ಪತ್ರೆಯ ಡಾ. ಮೂಗನಗೌಡ ಪಾಟೀಲ್ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.