ADVERTISEMENT

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 6:11 IST
Last Updated 27 ಫೆಬ್ರುವರಿ 2026, 6:11 IST
ಹಿರಿಯೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಕಾಂಗ್ರೆಸ್ ವಿಭಾಗದ ಪದಾಧಿಕಾರಿಗಳ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿದರು
ಹಿರಿಯೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಕಾಂಗ್ರೆಸ್ ವಿಭಾಗದ ಪದಾಧಿಕಾರಿಗಳ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿದರು   

ಹಿರಿಯೂರು: ‘2028ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಮಹಿಳಾ ಕಾರ್ಯಕರ್ತರ ಶ್ರಮ ಅತ್ಯಗತ್ಯ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಹೇಳಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಕಾಂಗ್ರೆಸ್ ವಿಭಾಗದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ ನೀಡಿದೆ. ಹಿಂದಿನ ಬಿಜೆಪಿ–ಜೆಡಿಎಸ್ ಸರ್ಕಾರಗಳು ಇಂತಹ ಯಾವುದೇ ಬಡವರ ಪರ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂಬುದನ್ನು ಸಾರ್ವಜನಿಕರ ಗಮನಕ್ಕೆ ತರಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಒಟ್ಟುಗೂಡಿಸಿ ಕಿರಾಣಿ ಅಂಗಡಿ, ಟೈಲರಿಂಗ್ ಆರಂಭಿಸಿದ ಮಹಿಳೆಯರಿದ್ದಾರೆ. ಈ ಬಗ್ಗೆ ನಮ್ಮ ಮುಖಂಡರು ಮಹಿಳೆಯರಿಗೆ ಅರ್ಥ ಮಾಡಿಸಬೇಕು’ ಎಂದು ಸೂಚಿಸಿದರು.

ADVERTISEMENT

ಶೀಘ್ರದಲ್ಲಿಯೇ ಬರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗುವುದು. ಅಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ವೇದಿಕೆಗೆ ಆಹ್ವಾನಿಸಿ, ಯೋಜನೆಗಳಿಂದ ಅವರ ಬದುಕು ಬದಲಾಗಿರುವ ಬಗ್ಗೆ ಹೇಳಿಸಬೇಕು ಎಂದು ತಿಳಿಸಿದರು.

ಮುಖಂಡರಾದ ಜೆ.ಆರ್. ಸುಜಾತಾ, ರಜಿಯಾ ಸುಲ್ತಾನ, ನಾಗರತ್ನಮ್ಮ, ಮಮತಾ, ಮಂಜುಳಾ, ಶಕುಂತಲಾ, ಜ್ಯೋತಿಲಕ್ಷ್ಮಿ, ಇಂದಿರಾ, ವಾಣಿ, ಸೆಲ್ವರಾಣಿ, ಅಶ್ರಫ್ ಜಾನ್, ಕರಿಯಮ್ಮ, ಗಿರಿಜಮ್ಮ, ಭಾಗ್ಯಮ್ಮ, ಹಸೀನಾ, ಮಂಜುಳಾ, ಸಲ್ಮಾ, ಸಮೀಂ ಉನ್ನೀಸಾ, ರಂಗಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.