ADVERTISEMENT

ಚಿತ್ರದುರ್ಗ: ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 6:13 IST
Last Updated 3 ಆಗಸ್ಟ್ 2022, 6:13 IST
ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದ ರಾಹುಲ್ ಗಾಂಧಿ
ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದ ರಾಹುಲ್ ಗಾಂಧಿ   

ಚಿತ್ರದುರ್ಗ: ಇಲ್ಲಿನ ಮುರುಘಾ ಮಠಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಭೇಟಿ ನೀಡಿದರು. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಮಾಠಾಧೀಶರೊಂದಿಗೆ ಸಂವಾದ ನಡೆಸಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 20ಕ್ಕೂ ಹೆಚ್ಚು ಮಠಾಧೀರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ಜೊತೆಗೆ ಇದ್ದರು.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಬಂದರು. ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ADVERTISEMENT

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇತ್ತೀಚೆಗೆ ಮುರುಘಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಜೂನ್ ತಿಂಗಳಲ್ಲಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿನೀಡಿ ಮಾಠಾಧೀಶರೊಂದಿಗೆ ಸಭೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.