ADVERTISEMENT

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 16:34 IST
Last Updated 3 ಜನವರಿ 2019, 16:34 IST
ಹೊಳಲ್ಕೆರೆಯಲ್ಲಿ ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದರು
ಹೊಳಲ್ಕೆರೆಯಲ್ಲಿ ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದರು   

ಹೊಳಲ್ಕೆರೆ: ಪ್ರಧಾನಿ ನರೇಂದ್ರ ಮೋದಿ ರಫೇಲ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಮಧು ಪಾಲೇಗೌಡ, ‘ಮೋದಿ ರಫೇಲ್ ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಉದ್ಯಮಿ ಅನಿಲ್ ಅಂಬಾನಿಗೆ ನೆರವಾಗಿದ್ದಾರೆ. ಧ್ವನಿಮುದ್ರಣದಲ್ಲಿ ಆಘಾತಕಾರಿ ಅಂಶಗಳು ಬಹಿರಂಗಗೊಂಡಿದ್ದು, ರಫೇಲ್ ಒಪ್ಪಂದದ ಕಡತಗಳು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರ ಮನೆಯಲ್ಲಿವೆ. ಇದೆಲ್ಲಾ ಅನುಮಾನಕ್ಕೆ ಕಾರಣವಾಗಿದೆ’ ಎಂದರು.

‘ಸರ್ಕಾರಿ ಸ್ವಾಮ್ಯದ ವಿಮಾನ ತಯಾರಿಕಾ ಕಂಪೆನಿ ಎಚ್.ಎ.ಎಲ್. ಬದಲಿಗೆ ಬಿಜೆಪಿ ಪರವಾಗಿರುವ ಅಂಬಾನಿ ಕುಟುಂಬಕ್ಕೆ ಗುತ್ತಿಗೆ ನೀಡಲಾಗಿದೆ. ಫ್ರಾನ್ಸ್ ಅಧ್ಯಕ್ಷರೂ ಇದನ್ನು ಒಪ್ಪಿಕೊಂಡಿದ್ದಾರೆ. ಇದರಿಂದ ಪ್ರಧಾನಿ ಉದ್ಯಮಿಗಳ ಪರವಾಗಿದ್ದಾರೆ ಎಂಬುದು ತಿಳಿಯುತ್ತದೆ’ ಎಂದು ದೂರಿದರು.

ADVERTISEMENT

ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ಶಶಿಕಿರಣ್‌ ಬಾಲು, ಕಿರಣ್‌ ಯಾದವ್, ರಂಗಸ್ವಾಮಿ, ಇಬ್ರಾಹಿಂ, ಕರಿಯಪ್ಪ, ಕಸ್ತೂರಪ್ಪ, ರುದ್ರೇಶ್, ಬಸವರಾಜ್, ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.