ಚಳ್ಳಕೆರೆ: ಕನ್ನಡ ಮಾಧ್ಯಮದಲ್ಲಿ ಓದಿದ ಗ್ರಾಮೀಣ ಭಾಗದವರು ವಿಜ್ಞಾನ ಮತ್ತು ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಸಾಧಿಸಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಜಿಟಿಟಿಸಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತರಗತಿ ಪ್ರಾರಂಭೋತ್ಸವ ಮತ್ತು ಪಾಲಕರ ಸಭೆ ಉದ್ಘಾಟಿಸಿ ಮಾತನಾಡಿದರು.
ಕನ್ನಡದಲ್ಲಿ ಪರೀಕ್ಷೆ ಬರೆದರೂ ಪರಿಗಣಿಸಲು ಅಧ್ಯಾಪಕರಿಗೆ ಸೂಚಿಸಿದ್ದೇನೆ. ಹೀಗಾಗಿ ಇಂಗ್ಲಿಷ್‍ನಲ್ಲಿ ಬರೆಯಬೇಕು ಎಂಬ ಭಯ, ಆತಂಕ ತೊರೆದು ಶ್ರದ್ಧೆ, ಪರಿಶ್ರಮದ ಓದುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇಲ್ಲಿ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳು ರಾಜ್ಯದ ವಿವಿಧ ಕಂಪನಿಗಳಲ್ಲಿ ದುಡಿಯುತ್ತಿದ್ದಾರೆ. ಕೈಗಾರಿಕಾ ವಲಯದಲ್ಲಿ ಈ ಶಿಕ್ಷಣಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ ಜಿಟಿಟಿಸಿ ಕೇಂದ್ರದ 250 ಸೀಟ್‍ಗಳು ಭರ್ತಿಯಾಗಿವೆ ಎಂದು ಪ್ರಾಂಶುಪಾಲ ತಿಪ್ಪೇಸ್ವಾಮಿ ಹೇಳಿದರು.
ಸಾಹಿತಿ ಸಿ.ಶಿವಲಿಂಗಪ್ಪ, ನಗರಸಭೆ ಅಧ್ಯಕ್ಷೆ ಮಂಜುಳಾ ಆರ್.ಪ್ರಸನ್ನಕುಮಾರ್, ಉಪಾಧ್ಯಕ್ಷೆ ಕವಿತಾ ಬೋರಯ್ಯ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಯ್ಯ, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶಗೌಡ, ಸದಸ್ಯ ಡಿ.ಕೆ.ಅನ್ವರ್ ಅಹಮದ್, ಉಪನ್ಯಾಸಕ ಹನುಮೇಶ, ಮಲ್ಲಿಕಾರ್ಜುನ ಬಿಳಗಿ, ಉಪನ್ಯಾಸಕಿ ಸ್ವಾತಿ, ನಯನಶ್ರೀ, ತೇಜಸ್ವಿನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.