ADVERTISEMENT

‘ಸಂವಿಧಾನವೇ ಭಾರತದ ಆಧಾರ ಸ್ತಂಭ’: ಶಾಸಕ ಎಂ.ಚಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 4:48 IST
Last Updated 27 ಜನವರಿ 2023, 4:48 IST
ಹೊಳಲ್ಕೆರೆಯಲ್ಲಿ ಗುರುವಾರ ನಡೆದ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ರೇಖಾ ಇದ್ದರು.
ಹೊಳಲ್ಕೆರೆಯಲ್ಲಿ ಗುರುವಾರ ನಡೆದ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ರೇಖಾ ಇದ್ದರು.   

ಹೊಳಲ್ಕೆರೆ: ‘ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವೇ ದೇಶಕ್ಕೆ ಆಧಾರ ಸ್ತಂಭ’ ಎಂದು ಶಾಸಕ ಎಂ.ಚಂದ್ರಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ನಡೆದ 74ನೇ
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಎಲ್ಲ ಜಾತಿ, ಜನಾಂಗ, ಧರ್ಮದವರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ನೀಡಬೇಕೆಂಬ ಪರಿಕಲ್ಪನೆಯಿಂದ ಶ್ರೇಷ್ಠವಾದ ಸಂವಿಧಾನ ರಚಿಸಿದ್ದಾರೆ. ಸಂವಿಧಾನದಿಂದ ದೇಶದ ಎಲ್ಲರಿಗೂ ಸಮಾನತೆ ಸಿಕ್ಕಿದೆ. ನಮ್ಮ ಸಂವಿಧಾನ ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದೆ. ದಕ್ಷಿಣ ಆಫ್ರಿಕಾದಂತಹ ದೇಶ ನಮ್ಮ ದೇಶದ ಸಂವಿಧಾನದಲ್ಲಿರುವ ಅಂಶಗಳನ್ನು ಅಳವಡಿಸಿಕೊಂಡಿದೆ. ನಾವೆಲ್ಲ ಅಂಬೇಡ್ಕರ್ ಅವರ ಹಾದಿಯಲ್ಲಿ ನಡೆಯಬೇಕಿದೆ’ ಎಂದರು.

ADVERTISEMENT

‘ಸಂವಿಧಾನ ಜಾರಿಯಾದ ನಂತರ ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳು ಲಭಿಸಿವೆ. ಹಕ್ಕುಗಳನ್ನು ಅನುಭವಿಸುವ ಜತೆಗೆ ನಾವೆಲ್ಲರೂ ಕರ್ತವ್ಯಗಳನ್ನೂ ಪಾಲಿಸಬೇಕು. ಸಂವಿಧಾನದ ಆಶಯಗಳಂತೆ
ನಡೆದುಕೊಳ್ಳಬೇಕು’ ಎಂದು ತಹಶೀಲ್ದಾರ್ ರೇಖಾ ಸಲಹೆ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದೇಶ್, ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಉಪಾಧ್ಯಕ್ಷ ಕೆ.ಸಿ. ರಮೇಶ್, ಸದಸ್ಯರಾದ ಮುರುಗೇಶ್, ನಾಗರತ್ನಾ, ಮಮತಾ, ಮನ್ಸೂರ್, ಸುಧಾ, ಸವಿತಾ, ಲೀಲಾ, ಕೆ.ಆರ್. ರಾಜಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ತಾಲ್ಲೂಕು ಪಂಚಾಯಿತಿ ಇಒ ಅಂಜನ್‍ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ವಾಸಿಂ, ಸಿಪಿಐ ರವೀಶ್, ಪಟ್ಟಣ ವ್ಯಾಪ್ತಿಯ ಎಲ್ಲ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.