ADVERTISEMENT

ಹೊಳಲ್ಕೆರೆ ಪಟ್ಟಣ ಅಭಿವೃದ್ಧಿಗೆ ಸಹಕಾರ: ಸಂಸದ ಗೋವಿಂದ ಕಾರಜೋಳ ಭರವಸೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2024, 16:18 IST
Last Updated 26 ಡಿಸೆಂಬರ್ 2024, 16:18 IST
ಹೊಳಲ್ಕೆರೆಯ ಪುರಸಭೆ ಕಚೇರಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಫಲಾನುಭವಿಗಳಿಗೆ ಇ-ಸ್ವತ್ತು ವಿತರಿಸಿದರು
ಹೊಳಲ್ಕೆರೆಯ ಪುರಸಭೆ ಕಚೇರಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಫಲಾನುಭವಿಗಳಿಗೆ ಇ-ಸ್ವತ್ತು ವಿತರಿಸಿದರು   

ಹೊಳಲ್ಕೆರೆ: ಪಟ್ಟಣದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಭರವಸೆ ನೀಡಿದರು.

ಪಟ್ಟಣದ ಪುರಸಭೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಇ-ಸ್ವತ್ತು ವಿತರಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಆಶ್ರಯ ಬಡಾವಣೆಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಅಭಿವೃದ್ಧಿ ಕಾರ್ಯಗಳಿಗೆ ಸಂಸದರ ನಿಧಿಯಿಂದ ಅನುದಾನ ಅಗತ್ಯವಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಬಹುದು ಎಂದರು.

ADVERTISEMENT

ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್ ಅವರು ಎಸ್.ಎಫ್.ಸಿ ಯೋಜನೆಯಡಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ಪಟ್ಟಣದ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು ಪುರಸಭೆಯ ಪ್ರಮುಖ ಆದ್ಯತೆಯಾಗಿದ್ದು, ಕುಡಿಯುವ ನೀರು, ಸ್ವಚ್ಚತೆ, ಬೀದಿದೀಪ ಮತ್ತಿತರ ಸೌಲಭ್ಯಗಳನ್ನು ನೀಡಲಾಗುವುದು ಎಂದರು.

ಪುರಸಭೆ ಉಪಾಧ್ಯಕ್ಷೆ ಎಚ್.ಆರ್.ನಾಗರತ್ನ ವೇದಮೂರ್ತಿ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ಸದಸ್ಯರಾದ ಬಿ.ಎಸ್.ರುದ್ರಪ್ಪ, ಸೈಯದ್ ಸಜೀಲ್, ಪಿ.ಎಚ್.ಮುರುಗೇಶ್, ಕೆ.ಸಿ.ರಮೇಶ್, ಸವಿತಾ ನರಸಿಂಹ ಖಾಟ್ರೋತ್, ಡಿ.ಎಸ್.ವಿಜಯ, ಮಲ್ಲಿಕಾರ್ಜುನ, ಮಮತಾ ಜಯಸಿಂಹ ಖಾಟ್ರೋತ್, ಆರ್.ಎ.ಅಶೋಕ್, ಶಬೀನ ಅಶ್ರಫ್ ಉಲ್ಲಾ, ಸೈಯದ್ ಮನ್ಸೂರ್, ಪೂರ್ಣಿಮಾ ಬಸವರಾಜ್, ಸುಧಾ ಬಸವರಾಜ್, ಎಸ್.ಆರ್.ಮಂಜುನಾಥ, ಬಸವರಾಜ್, ಮಜರ್ ವುಲ್ಲಾ ಖಾನ್ ಹಾಗೂ ಪುರಸಭೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.